ಬೆಂಗಳೂರು(ಸೆ.2): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮಧ್ಯಕರ್ನಾಟಕದ ರಾಜಧಾನಿ ದಾವಣಗೆರೆಗೆ ಆಗಮಿಸಲಿದ್ದಾರೆ.ದಾವಣಗೆರೆ ಜಿಲ್ಲೆ ಹರಿಹಾರ ತಾಲ್ಲೂಕಿನ ಕೊಂಡಜ್ಜಿಯಲ್ಲಿ ನಿರ್ಮಾಣ ಮಾಡಿರುವ ಪೊಲೀಸ್ ಪಬ್ಲಿಕ್ ಶಾಲೆ ಹಾಗೂ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣವಾಗಿರುವ ಗಾಂಧಿಭವನ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ಆರ್.ನಿರಾಣಿ,