ಬೆಂಗಳೂರು : ಬಾಂಬ್ ಬ್ಲಾಸ್ಟ್ ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಭೇಟಿ ಸಂದರ್ಭದಲ್ಲಿ ಸಚಿವರು, ಬಾಂಬ್ ಸ್ಫೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನೂ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಂಗಳೂರು