ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು ಇದೀಗ ಬಾಡಿಗೆ ಕೊಡುವ ಮನೆ ಮಾಲೀಕರು ಎಚ್ಚೆತ್ತುಕೊಳ್ಳಬೇಕಾಗಿದೆ. ಹೌದು, ಬೆಂಗ್ಳೂರಿನಲ್ಲಿ ಲಿವಿಂಗ್ ರಿಲೇಷನ್ಶಿಪ್ನಲ್ಲೇ ಇದ್ದುಕೊಂಡು ಮನೆ ದೋಚಿದ ಖತರ್ನಾಕ್ ಜೋಡಿ ಈಗ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ. ಮನೆಯನ್ನೇ ಗುಡಿಸಿ ಗುಂಡಾತರ ಮಾಡಿದ್ದ ಜೋಡಿ ಇದೀಗ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರ ಬಲೆಗೆ ಬಿದ್ದಿದೆ. ಲಿಖಿತಾ ಹಾಗೂ ಸುಮಂತ್ ಬಂಧಿತ ಆರೋಪಿಗಳು. ಈ ಖತರ್ನಾಕ್ ಜೋಡಿ ತಾವು ಬಾಡಿಗೆಗೆ