ಜೇನು ಕೃಷಿಯ ಜನಪ್ರಿಯತೆಯಿಂದಾಗಿ ಕೊಪ್ಪಳ ಜಿಲ್ಲೆಯಲ್ಲಿ ಸದ್ದಿಲ್ಲದೆ ಪಸರಿಸುತ್ತಿದೆ ಜೇನಿನ ಝೇಂಕಾರ. ಸ್ನೇಹಿತನ ಹೊಲದಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಜೇನು ಪರಾಗ ಸ್ಪರ್ಷದಿಂದಾಗಿ ಸ್ನೇಹಿತನ ಹೊಲದ ಸೂರ್ಯಕಾಂತಿ ಬೆಳೆಯಲ್ಲಿ ಶೇ.35ಕ್ಕಿಂತ ಅಧಿಕ ಇಳುವರಿಯನ್ನು ಪಡೆಯಲು ಅನುವು ಮಾಡಿಕೊಟ್ಟಿದ್ದಾರೆ.ಕೊಪ್ಪಳ ತಾಲೂಕಿನ ಡಂಬ್ರಳ್ಳಿಯ ಗ್ರಾಮದ ಜೇನು ಕೃಷಿಕ ಆನಂದರಡ್ಡಿ ಅವರು ಜೇನು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಜೇನು ಎಂದೊಡನೆ ಎಲ್ಲರಿಗೂ ಬಾಯಲ್ಲಿ ನೀರೂರುವುದು ಸಹಜ. ಆದರೆ ಜೇನು ಸಾಕಾಣಿಕೆ ಎಂದೊಡನೆ ದೂರ ಸರಿಯುವವರೆ ಬಹಳ.