ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭೀಕರ ಸರಣಿ ಅಪಘಾತ ನಡೆದಿದ್ದು ಒಟ್ಟು 8 ಜನರು ದುರ್ಮರಣವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 150 (ಎ) ನಲ್ಲಿ ಬೆಳಗ್ಗೆ ಸುಮಾರು 4.30 ರ ವೇಳೆಗೆ ಖಾಸಗಿ ಬಸ್, ಸರ್ಕಾರಿ ಬಸ್ ಮತ್ತು ಕ್ರೂಸರ್ ನಡುವೆ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್- ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿದ್ದು ಹಿಂದಿನಿಂದ ಬರುತ್ತಿದ್ದ ಖಾಸಗಿ ಬಸ್ ಸಹ ಕ್ರೂಸರ್ಗೆ ಡಿಕ್ಕಿ ಹೊಡೆದಿದೆ. ಕ್ರೂಸರ್ ಬೆಂಗಳೂರಿನಿಂದ ಬಳ್ಳಾರಿಗೆ ವಾಪಸ್ಸಾಗುತ್ತಿದ್ದರೆ,