ಸಾರಿಗೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಿಂದಾಗಿ ಐವರು ಸಾವನ್ನಪ್ಪಿದ ಘಟನೆ ಹಿರಿಯೂರಿನ ಗೊಲ್ಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 150 Aನಲ್ಲಿ ನಡೆದಿದೆ. ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತಿತ್ತು. ಈ ವೇಳೆ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಹಾಗೂ ಆಸ್ಪತ್ರೆಯಲ್ಲಿ ಒಬ್ಬ ಗಾಯಾಳು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಮೃತರನ್ನು