ಬೆಂಗಳೂರು ಗ್ರಾಮಾಂತರದ ಹೊಸಕೋಟೆ ವಿಧಾನಸಭಾ ಕ್ಷೇತ್ರ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗ್ತಿದೆ. ರಾಜ್ಯದಲ್ಲೇ ಅತ್ಯಂತ ಹೆಚ್ಚು ಶ್ರೀಮಂತ ಅಭ್ಯರ್ಥಿ ಬಿಜೆಪಿಯ ಎಂಟಿಬಿ ನಾಗರಾಜ್ 1510ಕೋಟಿ ಆಸ್ತಿ ಘೋಷಿಸಿದ್ದಾರೆ. ಇನ್ನು ಎದುರಾಳಿ ಶರತ್ ಬಚ್ಚೇಗೌಡ 100ಕೋಟಿ ಆಸ್ತಿಯನ್ನು ನಾಮಪತ್ರದ ಮೂಲಕ ತಿಳಿಸಿದ್ದಾರೆ. ಎರಡೂ ಪಕ್ಷ ಮತ್ತು ಅಭ್ಯರ್ಥಿಗಳು ನೀನಾ ನಾನ ಎಂಬಂತೆ ಸ್ಪರ್ದೆಗಿಳಿದಂತೆ ಮೆರವಣಿಗೆ ಜಾಥಾ ನಡೆಸಿ ನಾಮಪತ್ರ ಸಲ್ಲಿಸಿದರು. ಕ್ಷಣದಿಂದ ಕ್ಷಣಕ್ಕೆ ದಿನದಿಂದ ದಿನಕ್ಕೆ ಚುನಾವಣಾ ಕಾವು ಜೋರಾಗುತ್ತಿದ್ದು ನರಿ- ಸಿಂಹ