ಬೆಂಗಳೂರು: ಕಳ್ಳತನ ಆಪಾದನೆಯಿಂದ ಮನನೊಂದ ಮನೆಗೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಕೆ.ಆರ್ ಪುರ ನಿವಾಸಿ 40 ವರ್ಷದ ಉಮಾ ಆತ್ಮಹತ್ಯೆಗೆ ಶರಣಾದವರು. ಅವರು ಮನೆ ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನಾಭರಣ ಕಳುವಾಗಿತ್ತು. ಈ ಸಂಬಂಧ ಉಮಾ ಮೇಲೆ ಸಂಶಯದಿಂದ ಮನೆ ಮಾಲಿಕರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಉಮಾರನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದರು.ಇದರಿಂದ ಮನನೊಂದ ಉಮಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಮುನ್ನ