24 ವರ್ಷದ ವ್ಯಕ್ತಿಯೊಬ್ಬ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಉದ್ಯೋಗಿಗಳ ಫೋಟೋ ಮತ್ತು ವಿಡಿಯೋಗಳನ್ನು ತೆಗೆಯುತ್ತಿದ್ದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಇಂದಿರಾನಗರದಲ್ಲಿರುವ ಪ್ರತಿಷ್ಠಿತ ಸಾಫ್ಟ್ವೇರ್ ಕಂಪೆನಿಯಲ್ಲಿ ಆಫೀಸ್ ಬಾಯ್ ಆಗಿ ಸೇವೆ ಸಲ್ಲಿಸುತ್ತಿದ್ದ ಉತ್ತರಪ್ರದೇಶ ಮೂಲದ ಧರ್ಮೇಂದ್ರ ಕುಮಾರ್ ಯಾದವ್ ಮಹಿಳಾ ಉದ್ಯೋಗಿಗಳ ನಗ್ನ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದ, ಮಹಿಳಾ ಶೌಚಾಲಯದಲ್ಲೂ ರಹಸ್ಯ ಕ್ಯಾಮರಾ ಅಳವಡಿಸಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಂಪೆನಿಯ ಮಹಿಳಾ ಉದ್ಯೋಗಿಯೊಬ್ಬರು ಆರೋಪಿ ಧರ್ಮೆಂದ್ರ ವಿರುದ್ಧ