ಲಾಕ್ ಡೌನ್ ನಿಂದಾಗಿ ತಿಂಗಳಿಗೂ ಹೆಚ್ಚು ಕಾಲ ಮಧ್ಯಪ್ರದೇಶದಲ್ಲಿ ಸಿಲುಕಿದ್ದ 19 ವಿದ್ಯಾರ್ಥಿಗಳು ರಾಜ್ಯದತ್ತ ಪಯಣ ಬೆಳೆಸಿದ್ದಾರೆ. ಮಧ್ಯಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಉತ್ತರಕನ್ನಡ ಜಿಲ್ಲೆಯ 19 ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿಶೇಷ ಕಾಳಜಿಯಿಂದ ಮರಳಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ನವೋದಯ ಶಾಲೆಯ 19 ಜನ ವಿದ್ಯಾರ್ಥಿಗಳು ಮಧ್ಯಪ್ರದೇಶದಲ್ಲಿ ಸಿಲುಕಿಕೊಂಡಿದ್ದರು. ಜಿಲ್ಲಾ ಉಸ್ತುವಾರಿ ಹಾಗೂ ಸಕ್ಕರೆ ಮತ್ತು ಕಾರ್ಮಿಕ ಇಲಾಖೆ ಸಚಿವ ಶಿವರಾಮ ಹೆಬ್ಬಾರ್ ವಿಶೇಷ ಕಾಳಜಿವಹಿಸಿ ರಾಜ್ಯ ಸರಕಾರದೊಂದಿಗೆ ಹಾಗೂ