ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆಗೊಳಗಾಗಿದ್ದ ನಿವೃತ್ತ CRPF ಯೋಧನ ಮನೆಗೆ ಸಚಿವರು ಭೇಟಿ ನೀಡಿದರು.ಪರಮೇಶ್ವರಪ್ಪ ಬಾರಂಗಿ ಮನೆಗೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿದ್ರು. ಬ್ಯಾಡಗಿ ತಾಲೂಕಿನ ಕುಮ್ಮೂರು ಗ್ರಾಮದ ಯೋಧನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ, ಮಾತನಾಡಿದ ಸಚಿವರು ಹಲ್ಲೆಗೊಳಗಾದ ಯೋಧನಿಗೆ ಬೆಂಗಳೂರು ವಿಕ್ರಂ ಆಸ್ಪತ್ರೆಯಲ್ಲಿ ಹಲ್ಲು ನೋವಿಗೆ ಚಿಕಿತ್ಸೆ ಕೊಡಿಸುತ್ತೇನೆ. ಪೊಲೀಸ್ ಅಥವಾ ಮೆಟ್ರೊ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ್ರು.