ಬೆಂಗಳೂರು : ಲೋಕಸಭೆ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ತಮ್ಮ ಆಸ್ತಿಯ ವಿವರವನ್ನು ಆಯೋಗಕ್ಕೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬದ ಆಸ್ತಿ 20.93 ಕೋಟಿ ಇದೆ ಎಂದು ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. 2014 ರ ಲೋಕಸಭಾ ಚುನಾವಣೆ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಆಸ್ತಿ ವಿವರದಲ್ಲಿ 10 ಕೊಟಿ ರೂ.ಗಿಂತ ಹೆಚ್ಚು ಎಂದು ಉಲ್ಲೇಖ ಮಾಡಲಾಗಿತ್ತು.