ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 257 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ 131 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 205 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,878 ಸಕ್ರಿಯ ಪ್ರಕರಣಗಳು ಇದ್ದು, ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 29,95,857 ಮಂದಿಗೆ ಕೊರೊನಾ ಬಂದಿದೆ. 29,50,747 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.94