ಹುಬ್ಬಳ್ಳಿ- ಧಾರವಾಡ ಜಿಲ್ಲೆಯ ರಸ್ತೆ ಕಾಮಗಾರಿ ಬಗ್ಗೆ ಸರಕಾರ ಖಡಕ್ ಸೂಚನೆ ಕೊಟ್ಟಿದೆ. ಹುಬ್ಬಳ್ಳಿ- ಧಾರವಾಡ ಜಿಲ್ಲೆಯು ಉತ್ತರ ಕರ್ನಾಟಕದ ಹೃದಯಭಾಗವಾಗಿದ್ದು, ಈ ಜಿಲ್ಲೆಯ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೂಚಿಸಿದ್ದಾರೆ.ವಿಧಾನಸೌಧದಲ್ಲಿಂದು ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತ ಪ್ರಗತಿ ಪರಿಶೀಲನೆ ನಡೆಸಿದ ಅವರು, ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಅಭಿವೃದ್ಧಿ,