ನಿರಂತರ ಮಳೆಗೆ ಕಾಫಿನಾಡಿನಲ್ಲಿರುವ ಐತಿಹಾಸಿಕ ಅಯ್ಯನಕೆರೆ ಕೋಡಿ ಬಿದ್ದಿದೆ.ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಐದು ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಕೂಡ ಮುಂದುವರೆದಿದ್ದು ಗಿರಿ ಭಾಗದಲ್ಲೂ ಧಾರಾಕಾರ ಮಳೆಯಾಗ್ತಿರೋ ಹಿನ್ನೆಲೆ ಐತಿಹಾಸಿಕ ಅಯ್ಯನಕೆರೆ ಕೋಡಿ ಬಿದ್ದಿದೆ.ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಸಮೀಪವಿರುವ ಅಯ್ಯನಕರೆ ಐದು ವರ್ಷಗಳ ಬಳಿಕ ಕೋಡಿ ಬಿದ್ದಿರೋದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಇನ್ನು ಈ ಕೆರೆ ಕಳೆದ ಐದು ವರ್ಷಗಳಿಂದ ಭರ್ತಿಯಾಗದ ಕಾರಣ ಕೆರೆ ಅಚ್ಚುಕಟ್ಟು