ಅಶ್ಲೀಲ ಪದ ಬಳಸಿ ವಿವಾದಕ್ಕೆ ಗುರಿಯಾಗಿದ್ದ ಸಚಿವ ಕೆ.ಎಸ್. ಈಶ್ವರಪ್ಪ ನಂತರ ಇದೀಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನಾಲಗೆ ಹರಿಬಿಡುವ ಮೂಲಕ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಗೆ ಅನ್ನಪೂರ್ಣೇಶ್ವರಿ ಎಂದು ಮರುನಾಮಕರಣ ಮಾಡುವ ಪ್ರಸ್ತಾಪಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ತಮ್ಮ ಕಚರಿಯಲ್ಲಿ ಇಂದಿರಾ ಕ್ಯಾಂಟೀನ್ ಬೇಕಾದರೂ