ಬೆಂಗಳೂರು : ದೇಶದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ ಸಿಎಂ ಕುಮಾರಸ್ವಾಮಿ ಅವರು ಮಾನವೀಯ ಮುಖವುಳ್ಳ ಸರ್ಕಾರ ನಮ್ಮದು ಎಂಬುದಾಗಿ ಹೇಳಿದ್ದಾರೆ. ಮಹಿಳಾ ಸಬಲೀಕರಣ, ಉದ್ಯೋಗ, ಭದ್ರತೆ ನೀಡಲು ಸರ್ಕಾರ ಬದ್ಧವಾಗಿದೆ. ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಖಾಸಗಿ ಸಂಸ್ಥೆಗಳ ಸಾಥ್ ನೀಡಲಾಗಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಮೂಲಕ ಸವಲತ್ತು ಕಲ್ಪಿಸಲಾಗಿದೆ. ವಿದ್ಯಾರ್ಥಿನಿಲಯಗಳ ನಿರ್ಮಾಣದ ಮೂಲಕ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ