ಭಾರತ ಬಂದ್ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಂಡ ಕಾರಣ ಪರದಾಡುತ್ತಿದ್ದ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಅವರ ಸ್ಥಳಗಳಿಗೆ ತಲುಪಿಸಿದ ಪೊಲೀಸ್ ಸಿಬ್ಬಂದಿ ಔದಾರ್ಯತೆ ಮೆರೆದ ಘಟನೆ ನಡೆದಿದೆ. ಗದಗ ನಗರದಲ್ಲಿ ಈ ಚಿತ್ರಣ ಕಂಡು ಬಂದಿದೆ. ದೇಶಾದ್ಯಂತ ನಿನ್ನೆ ಮತ್ತು ಇಂದು ಕಾರ್ಮಿಕ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಬಂದ್ ಘೋಷಿಸಿದ್ದರ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಬೆಳ್ಳಂಬೆಳಗ್ಗೆ ಶಾಲೆ ಹಾಗೂ