ಬೆಂಗಳೂರು : ನಿರಾಧಾರವಾಗಿ ಪತಿ ವಿರುದ್ಧ ನಪುಂಸಕತ್ವದ ಆರೋಪ ಹೊರಿಸುವುದು ‘ಮಾನಸಿಕ ಕ್ರೌರ್ಯ’ ಎಂದು ವ್ಯಾಖ್ಯಾನಿಸಿರುವ ಹೈಕೋರ್ಟ್, ಅದನ್ನು ಆಧರಿಸಿ ಪತಿ ವಿಚ್ಚೇದನ ಕೋರಬಹುದು ಎಂದು ಆದೇಶಿಸಿದೆ. ಅಲ್ಲದೆ, ಪ್ರಕರಣವೊಂದರಲ್ಲಿ ಪತಿಯ ವಿರುದ್ಧ ಆಧಾರರಹಿತವಾಗಿ ನಪುಂಸಕತ್ವದ ಆರೋಪ ಹೊರಿಸಿದ ಪತ್ನಿಯ ನಡೆಯನ್ನು ಆಕ್ಷೇಪಿಸಿ, ವಿಚ್ಚೇದನ ಮಂಜೂರು ಮಾಡಿದೆ.ಸಾಕ್ಷ್ಯಧಾರವಿಲ್ಲದೆ ಪತ್ನಿ ನಪುಂಸಕತ್ವದ ಆರೋಪ ಹೊರಿಸಿ ಘನತೆಗೆ ಧಕ್ಕೆ ತಂದರೂ ವಿಚ್ಚೇದನ ಮಂಜೂರಾತಿ ಮಾಡಲು ನಿರಾಕರಿಸಿದ ಧಾರವಾಡದ ಪ್ರಧಾನ ಕೌಟುಂಬಿಕ ನ್ಯಾಯಾಲಯದ