ದೇಶದ ಯಾವುದೇ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ತಪ್ಪದೇ ಇದನ್ನು ಪಾಲಿಸಬೇಕು. ಕರ್ನಾಟಕಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡುವುದು ಕಡ್ಡಾಯವಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ , ದೇಶದ ಯಾವುದೇ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಸಹ ಮುಂಜಾಗ್ರತಾ ಕ್ರಮವಾಗಿ 14 ದಿನಗಳ