ಕೊರೊನಾ ವೈರಸ್ ನಿಯಂತ್ರಣಕ್ಕಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಆದರೆ ಈ ಆದೇಶವನ್ನು ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳೋದು ಖಂಡಿತ. ಹಾವೇರಿ ಜಿಲ್ಲೆಯಲ್ಲಿ ಕೊರೋನಾ (ಕೋವಿಡ್-19) ಸಾಂಕ್ರಾಮಿಕ ರೋಗ ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಆರೋಗ್ಯದ ದೃಷ್ಟಿಯಿಂದ ಕಡ್ಡಾಯವಾಗಿ ಇದನ್ನು ಪಾಲಿಸಬೇಕು. ಉದ್ದೇಶಪೂರ್ವಕವಾಗಿ ನಿಷೇಧಾಜ್ಞೆ ಉಲ್ಲಂಘಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.ಕೊರೋನಾ ಮುಂಜಾಗ್ರತಾ ಕ್ರಮ ಕುರಿತಂತೆ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ