ಬೆಂಗಳೂರು : ಮೈತ್ರಿ ಸರ್ಕಾರದಿಂದ ಬೇಸರಗೊಂಡು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ವರಿಷ್ಠ ದೇವೇಗೌಡರಿಗೆ 4 ಪುಟಗಳ ರಾಜೀನಾಮೆ ಪತ್ರ ಬರೆದ ಎಚ್.ವಿಶ್ವನಾಥ್ ಅವರು ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆಗೆ ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ. ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿಶ್ವನಾಥ್ ಅವರು, ಈವರೆಗೆ ಪ್ರಾಮಾಣಿಕವಾಗಿ ಜೆಡಿಎಸ್ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಹುಣಸೂರು ವಿಧಾನ ಸಭಾ ಕ್ಷೇತ್ರದ ಶಾಸಕನಾಗಿ ಆಯ್ಕೆಯಾಗುವ