ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನವನ್ನು ಕಲಬುರಗಿ ನಗರ ಮತ್ತು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17ದಂದು ಸೋಮವಾರ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು.ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಹೈ-ಕ ವಿಮೋಚನಾ ದಿನಾಚರಣೆ ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರ ಅಧ್ಯಕ್ಷತೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಹೈದ್ರಾಬಾದ ಕರ್ನಾಟಕ ಪ್ರದೇಶ ವಿಮೋಚನಾ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯು ತೀರ್ಮಾನಿಸಿತು. ಹೈದ್ರಾಬಾದ ಕರ್ನಾಟಕ ದಿನಾಚರಣೆಯ ಮುಂಚಿತವಾಗಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಹೈದ್ರಾಬಾದ್ ಕರ್ನಾಟಕ ವಿಮೋಚನೆ