ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಶುರುವಾಗುತ್ತಿದೆ. ಈ ಹಿನ್ನೆಲೆ ಮಹಾರಾಷ್ಟ್ರ ಶಿವಸೇನೆ ಸಂಸದ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸಕ್ಕೆ ಮುಂದಾಗಿದ್ದಾರೆ. ಕೇಂದ್ರ ಗೃಹ ಸಚಿವರ ಹೇಳಿಕೆ ಬಳಿಕವೂ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ ಮಾನೆ ಬೆಳಗಾವಿಗೆ ಬರುವುದಾಗಿ ಪತ್ರ ಬರೆದಿದ್ದಾರೆ. ಎಂಇಎಸ್ ಮಹಾಮೇಳಾವ್ಗೆ ಬರುತ್ತಿದ್ದೇನೆ. ಸೂಕ್ತ ಭದ್ರತೆ ನೀಡುವಂತೆ ಸಂಸದ ಧೈರ್ಯಶೀಲ ಮಾನೆ ಬೆಳಗಾವಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಮಹಾಮೇಳಾವ್ಗೆ ಅನುಮತಿ ನೀಡದಂತೆ