ನಾನು ಮಂತ್ರಿಸ್ಥಾನದ ಆಕಾಂಕ್ಷಿಯಲ್ಲ, ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ ಎಂದು ನೂತನ ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಹೇಳಿದ್ದಾರೆ. ವಿಧಾನಸೌಧದ ಕಾರ್ಯದರ್ಶಿ ಎಸ್.ಮೂರ್ತಿ, ಇಬ್ರಾಹಿಂ ಅವಿರೋಧ ಆಯ್ಕೆಯನ್ನು ಘೋಷಿಸಿ ಪ್ರಮಾಣ ಪತ್ರ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಮತ್ತು ಸಿಎಂ ಸಿದ್ದರಾಮಯ್ಯ ನನ್ನ ಮೇಲೆ ಭರವಸೆಯಿಟ್ಟು ಅವಕಾಶ ನೀಡಿದ್ದಾರೆ. ಅವರ ಭರವಸೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಸಚಿವ ಸ್ಥಾನದ ಮೇಲೆ ಆಸೆಯಿಟ್ಟು ವಿಧಾನಪರಿಷತ್ಗೆ ಬಂದಿಲ್ಲ.