ಚಿಕ್ಕಮಗಳೂರು : ನನ್ನ ಕ್ಷೇತ್ರದಲ್ಲಿ ನನ್ನನ್ನ ಸೋಲಿಸಲು ಡೀಲ್ ಹಾಗೂ ಚಕ್ರವ್ಯೂಹ ರಚಿಸಿದ್ದಾರೆ. ಅದನ್ನು ಭೇದಿಸಲು ನಾನು ಅಭಿಮನ್ಯು ಅಲ್ಲ, ಅರ್ಜುನನಾಗಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಟಾಂಗ್ ನೀಡಿದರು.ಜಿಲ್ಲೆಯ ಶೃಂಗೇರಿಯ ಗೌರಿಶಂಕರ್ ಸಭಾಂಗಣದಲ್ಲಿ ಬಿಜೆಪಿ ಆಯೋಜಿಸಿದ್ದ ಚುನಾವಣಾ ಪ್ರಚಾರದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಡಿ.ಎನ್.ಜೀವರಾಜ್ ಪರ ಮತಯಾಚನೆ ಮಾಡಿದರು.ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು