ಅಕ್ರಮ ಗಣಿಗಾರಿಕೆ ವಿರುದ್ಧದ ನನ್ನ ಹೋರಾಟ ಏಕಾಂಗಿ ಅನಿಸಬಹುದು. ಆದರೆ ಮುಂದಿನ ದಿನಗಳಲ್ಲಿ ನನ್ನ ಜೊತೆ ಯಾರೆಲ್ಲ ಇದ್ದಾರೆ ಎಂಬುದು ತಿಳಿಯಲಿದೆ ಎಂದು ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗಣಿಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರನ್ನು ಸೋಮವಾರ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಕೆಆರ್ ಎಸ್ ಡ್ಯಾಂ ಬಳಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಮೇಲೆ ಈಗಾಗಲೇ ಸುಮಾರು 100 ಕೋಟಿ ರೂ. ದಂಡ ವಿಧಿಸಲಾಗಿದೆ.