ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನಲೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಪಟ್ಟು ಹಿಡಿದಿದ್ದಾರೆ. ಶಿವಮೊಗ್ಗದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ದಾಖಲೆ ಇಲ್ಲದೇ ನನ್ನ ಮೇಲೆ ಆರೋಪ ಮಾಡಿ ರಾಜೀನಾಮೆ ಕೇಳುವುದನ್ನು ಒಪ್ಪಲು ಸಾಧ್ಯವಿಲ್ಲ. ಕಾಂಗ್ರೆಸ್ ನವರ ಆರೋಪಗಳಿಗೆ ಬಗ್ಗಲ್ಲ ಎಂದರು. ನನ್ನ ಮೇಲೆ ಆರೋಪಕ್ಕೆ ಒಂದು ದಾಖಲೆಯೂ ಇಲ್ಲ. ಕಾಂಗ್ರೆಸ್ ನವರು ಮೊದಲಿನಿಂದಲೂ ನಾನು ರಾಜೀನಾಮೆ ಕೇಳುತ್ತಲೇ ಇದ್ದಾರೆ.