ನಾನು ರಾಜೀನಾಮೆ ನೀಡುತ್ತೇನೆ ಎಂಬುದು ಊಹಾಪೋಹ. ನಾನು ಸಿಎಂ ಬೊಮ್ಮಾಯಿ ಅವರ ಜೊತೆ ಖಾತೆ ಹಂಚಿಕೆ ಕುರಿತು ಮಾತನಾಡಿದ್ದು, ಅವರ ನಿರ್ಧಾರವನ್ನುಕಾದು ನೋಡುತ್ತೇನೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ಬೆಂಗಳೂರಿನಿಂದ ವಿಜಯನಗರದ ವೇಣುಗೋಪಲ ದೇವಸ್ಥಾನಕ್ಕೆ ಶುಕ್ರವಾರ ಆಗಮಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 15ರ ಸ್ವಾತಂತ್ರೋತ್ಸವದಲ್ಲಿ ದ್ವಜಾರೋಹಣ ನೆರವೇರಿಸುವೆ. ವಿಜಯನಗರ ಜಿಲ್ಲೆಯಲ್ಲಿ ಪ್ರಥಮ ಭಾರಿಗೆ ಧ್ವಜಾರೋಹಣ ಮಾಡುವ ಅವಕಾಶ ನನಗೆ ಸಿಕ್ಕಿದೆ. ಹೀಗಾಗಿ ಅದು ನನ್ನ ಸುಯೋಗವೆಂದು