ಗುಜರಾತ್ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ನಾನು ಹೋಗುವುದಿಲ್ಲ. ಹೈಕಮಾಂಡ್ನಿಂದ ಯಾವುದೇ ಸೂಚನೆ ಬಂದಿಲ್ಲ. ಕರ್ನಾಟಕ ಬಿಟ್ಟು ಎಲ್ಲೂ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಅನೇಕ ರಾಷ್ಟ್ರೀಯ ನಾಯಕರಿದ್ದಾರೆ. ಅವರೆಲ್ಲಾ ಗುಜರಾತ್ ರಾಜ್ಯದಲ್ಲಿ ಚುನಾವಣೆ ಪ್ರಚಾರ ಮಾಡುವ ಹಿನ್ನೆಲೆಯಲ್ಲಿ ನಾನು ಗುಜರಾತ್ಗೆ ಹೋಗುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಗುಜರಾತ್ ಶಾಸಕರಿಗೆ ಅತ್ಯಂತ ಆತ್ಮಿಯರಾಗಿರುವುದರಿಂದ