ಬೆಂಗಳೂರು : ಜೆಡಿಎಸ್ನ ಇನ್ನೊಂದು ವಿಕೆಟ್ ಪತನವಾಗಿದೆ. ನಿರೀಕ್ಷೆಯಂತೆ ಅರಕಲಗೂಡು ಶಾಸಕ ಎಟಿ ರಾಮಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಕಾರ್ಯದರ್ಶಿಗಳಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆ ಸಲ್ಲಿಕೆ ಬಳಿಕ ಮಾತನಾಡಿದ ಅವರು, ಜೆಡಿಎಸ್ ಪಕ್ಷ ನಾನು ಬಿಡಲಿಲ್ಲ. ಅವರೇ ಹೊರೆಗೆ ಹಾಕಿದ್ರು. ನಾನು ಯಾವತ್ತು ಬಿಡ್ತೀನಿ ಅಂತ ಹೇಳಿಲ್ಲ. ಎಲ್ಲಾ ಪಕ್ಷದಲ್ಲಿ ಲೋಪದೋಷ ಇರುತ್ತವೆ. ನಾನು ಬಲಿಪಶುವಾದೆ. ಹಣದ ಮುಂದೆ ಬಲಿಪಶು ಆಗಿದ್ದೇನೆ. ಅಕ್ರಮವನ್ನು