ರಮೇಶ್ ಜಾರಕಿಹೊಳಿ ಅವರ ನಡೆ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿತ್ತು.ಕೆಲವು ಸಲ ಅವರು ಅಸಮಾಧಾನ ತೋಡಿಕೊಂಡಿದ್ರು.ನನ್ನ ಜವಾಬ್ದಾರಿ ಎಲ್ಲರನ್ನೂ ಪಕ್ಷದಲ್ಲಿ ಜತೆಗೆ ಕರೆದೊಯ್ಯುವುದು.ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಅರ್ಧ ಗಂಟೆ ಚರ್ಚೆ ಮಾಡಿದ್ದೇನೆ.ಮೋದಿಯವ್ರು ಮತ್ತೆ ಪ್ರಧಾನಿ ಆಗಬೇಕು, ಪಕ್ಷದಲ್ಲಿ ಸಹಕಾರ ಕೊಡ್ತೇನೆ ಅಂತ ಹೇಳಿದ್ದಾರೆ.ಅವರಿಗೂ ಕೆಲವು ಸಣ್ಣಪುಟ್ಟ ಅಸಮಧಾನ ಇದ್ವು, ಅದರ ಬಗ್ಗೆ ಮಾತಾಡಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ. ನನ್ನನ್ನು ವಿರೋಧಿಸಿದರೆ ಮೋದಿಯವರನ್ನು ವಿರೋಧಿಸಿದಂತೆ