ಗೃಹ ಸಚಿವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಬಿಜೆಪಿ ಕಾರ್ಯಕರ್ತನನ್ನ ಬಂಧಿಸಿದ್ದಾರೆ. ಅದಕ್ಕಾಗಿ ಗೃಹ ಸಚಿವರ ಸೇಡಿನ ರಾಜಕಾರಣ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದೇವೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.ಕುಂದಗೋಳ-ಚಿಂಚೋಳಿ ಎರಡು ಕ್ಷೇತ್ರಗಳಲ್ಲಿ ಜಯ ಸಾಧಿಸುತ್ತೇವೆ. ಈಗಾಗಲೇ ಕಾರ್ಯಕರ್ತರು-ಮುಖಂಡರುಗಳ ಜೊತೆ ಸಭೆ ನಡೆಸಿದ್ದೇವೆ ಎಂದರು.ಕಲಬುರಗಿ, ಕೋಲಾರ ಲೋಕಸಭೆ ಕ್ಷೇತ್ರ ಸೇರಿದಂತೆ 22 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಮಂಡ್ಯದಲ್ಲಿ ಸುಮಲತಾ ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತಾರೆ. ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗ್ತಾರೆ ಅಂತ