ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಂತೆ ನನಗೆ ಏಕವಚನ ಪ್ರಯೋಗಿಸುವುದಾಗಲಿ ಅಥವಾ ಕೆಟ್ಟಪದಗಳನ್ನು ಬಳಸಲು ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಾವು ಕೂಡಾ ಬಳ್ಳಾರಿಗೆ ಶಾಂತಿಯುತವಾಗಿ ಪಾದಯಾತ್ರೆ ಮಾಡಿದ್ದೇವೆ. ನೀವು ಕೂಡಾ ಶಾಂತಿಯುತವಾಗಿ ಪಾದಯಾತ್ರೆ ಮಾಡಿ. ನಾವು ನಿಮ್ಮೊಂದಿಗೆ ಕೈ ಜೋಡಿಸಿ ಸಹಕರಿಸುತ್ತೇವೆ ಎಂದು ತಿಳಿಸಿದ್ದಾರೆ. ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದಷ್ಟೆ ಶಾಂತಿ ನೆಲೆಸಿದೆ. ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಬಾರದು ಎನ್ನುವ ಕಾರಣಕ್ಕೆ