ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾನೇನು ತಪ್ಪು ಮಾಡಿಲ್ಲ. ನನಗೇನೂ ಗೊತ್ತಿಲ್ಲ ಎಂದು ಸಚಿವ ಕೆಎಸ್ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಯಾರು ಅನ್ನೋದೇ ನನಗೆ ಗೊತ್ತಿಲ್ಲ. ನನ್ನ ವಿರುದ್ಧ ಈ ಹಿಂದೆ ಕಮಿಷನ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದರು. ನಾನು ಯಾವುದೇ ತಪ್ಪು ಮಾಡಿಲ್ಲ ಅಂದ ಮೇಲೆ ರಾಜೀನಾಮೆ ಕೊಡುವ ಪ್ರಶ್ನೆಯೇ