ಸಿಎಂ, ಡಿಸಿಎಂ ಸೇರಿ ಎಲ್ಲಾ ಸಚಿವರು ಹಣತಿಂದಿಲ್ಲ ಎಂದು ಪ್ರಮಾಣ ಮಾಡಲಿ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಮಾಗಡಿಯಲ್ಲಿ ಮಾತನಾಡಿದ ಅವರು, ಅವರ ಹೇಳಿಕೆಗೆ ಮಾನ್ಯತೆ ನೀಡಬೇಕಿಲ್ಲ. ಚುನಾವಣೆ ಬಂದಾಗ ಯಾವ ಪಕ್ಷ ಅಧಿಕಾರದಲ್ಲಿರಬೇಕು ಅಂತ ಜನ ತೀರ್ಮಾನ ಮಾಡ್ತಾರೆ.ಕಳೆದ ಐದು ತಿಂಗಳ ಹಿಂದೆ ಜನ ನಿರ್ಧಾರ ಮಾಡಿ ನಮ್ಮನ್ನ ಆಯ್ಕೆ ಮಾಡಿದ್ದಾರೆ. ಈ ಆಣೆ-ಪ್ರಮಾಣದ ಬಗ್ಗೆ ನನಗೆ ನಂಬಿಕೆ ಇಲ್ಲ.