ರಾಮನಗರ : ನಾಮಪತ್ರ ಸಲ್ಲಿಕೆ ಬಳಿಕ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಸಂಚಾರ ಮಾಡಿ, ಕ್ಷೇತ್ರದೆಲ್ಲೆಡೆ ಅಬ್ಬರದ ಪ್ರಚಾರ ನಡೆಸಿದ್ದಾರೆ.ಇದೇ ವೇಳೆ ಚನ್ನಪಟ್ಟಣಕ್ಕೆ ಮೋದಿ ಆಗಮನ ವಿಚಾರ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ, ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ.ಹೀಗಾಗಿ ಮೋದಿ ಹೆಸರು ಹೇಳ್ಕೊಂಡು ಚುನಾವಣೆ ಮಾಡ್ತಿದ್ದಾರೆ. ಪ್ರಧಾನಿ ಮೋದಿಯವರ ಮೇಲೆ ನನಗೆ ಅಪಾರ ಗೌರವವಿದೆ. ಆದರೆ ಈ ಬಾರಿ ರಾಜ್ಯದಲ್ಲಿ ಬಿಜೆಪಿ ವಿರುದ್ಧದ ಅಲೆ