ಬೆಂಗಳೂರು : ಸನಾತನ ಧರ್ಮಕ್ಕೆ ಸೇರಿದ ಪಕ್ಷ, ರಾಷ್ಟ್ರೀಯತೆ ಮೈಗೂಡಿಸಿಕೊಂಡ ಪಕ್ಷವನ್ನು ಸೇರಿದ್ದೇನೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರಿಗೆ ಧ್ವಜ ನೀಡಿ, ಶಾಲು ಹಾಕಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷಕ್ಕೆ ಸ್ವಾಗತಿಸಿದರು.ಈ ವೇಳೆ ಮಾತನಾಡಿದ ಅವರು, ನಾನು ಬಾಲ್ಯಕಾಲದಿಂದ ಸನಾತನ ಧರ್ಮ, ರಾಷ್ಟ್ರೀಯತೆಗೆ ಬದ್ಧನಾಗಿದ್ದ ವ್ಯಕ್ತಿ.