ಸಿಎಂಗೆ ಕಿತ್ತೂರು ರಾಣಿ ಚೆನ್ನಮ್ಮ ಕುರಿತಾದ 3 ಮನವಿ ಮಾಡ್ತಿದ್ದೇನೆ. ಮಹಾರಾಷ್ಟ್ರದ ಪುಣೆಯಲ್ಲಿರುವ ರಾಣಿ ಚೆನ್ನಮ್ಮ ದಾಖಲೆಗಳು ಹಾಗೂ ಮ್ಯೂಸಿಯಂನಲ್ಲಿರುವ ಖಡ್ಗವನ್ನು ನಮ್ಮ ರಾಜ್ಯಕ್ಕೆ ವಾಪಸ್ ತರಬೇಕು.ಈ ಕುರಿತು ಸಿಎಂ ಸಿದ್ದರಾಮಯ್ಯ ಕೇಂದ್ರದ ಗಮನಕ್ಕೆ ತರಬೇಕು ಎಂದು ಬೆಂಗಳೂರಿನಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಪ್ರಯುಕ್ತ ಟೌನ್ ಹಾಲ್ ಸಮೀಪ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ