ನನಗೆ ನನ್ನದೇ ಆದ ಕ್ಷೇತ್ರವಿದೆ. ಉತ್ತರ ಕರ್ನಾಟಕ ಸೇರಿದಂತೆ ಬೇರೆ ಕಡೆ ಸ್ಪರ್ಧಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರಕರ್ನಾಟಕದಲ್ಲಿ ಸ್ಪರ್ಧಿಸಲು ಒತ್ತಡವಿದೆ ಎನ್ನುವ ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ನನ್ನ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸುತ್ತೇನೆ. ಇತರ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಯಾವುದೇ ಇರಾದೆ ಹೊಂದಿಲ್ಲ ಎಂದು ಉತ್ತರ ಕರ್ನಾಟಕದಲ್ಲಿ ಸ್ಪರ್ಧೆಯ ಬಗ್ಗೆ ತೆರೆ ಎಳೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಸ್ಪರ್ಧಿಸಲು ಕ್ಷೇತ್ರವಿಲ್ಲ. ಆದ್ದರಿಂದ ಬೇರೆ ಕ್ಷೇತ್ರಗಳನ್ನು