ವಿಜಯಪುರ : ಆರ್ ಎಸ್ ಎಸ್ ಶಾಖೆಯಿಂದ ತಮಗೆ ಕಲಿಯುವುದು ಏನೂ ಇಲ್ಲ, ಆರ್ ಎಸ್ ಎಸ್ ನಿಂದ ತರಬೇತಿ ಪಡೆದು ಬಂದವರು ವಿಧಾನಸೌಧದಲ್ಲಿ ಕಲಾಪ ನಡೆಯುವಾಗ ನೀಲಿ ಚಿತ್ರ ವೀಕ್ಷಣೆ ಮಾಡುತ್ತಿರುತ್ತಾರೆ ಎಂದು ಬಿಜೆಪಿ ನಾಯಕರಿಗೆ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಇತ್ತೀಚೆಗೆ ಕುಮಾರಸ್ವಾಮಿಯವರನ್ನು ಆರ್ ಎಸ್ ಎಸ್ ಶಾಖೆಗೆ ಬಂದು ಸಂಘದ ಚಟುವಟಿಕೆಗಳನ್ನು ಕಲಿಯುವಂತೆ