ಬೆಂಗಳೂರು : ಗುರುವಾರ ದೆಹಲಿಯಲ್ಲಿ ನಾನು ಕಾಂಗ್ರೆಸ್ ಪಕ್ಷದ ಸದಸ್ಯತ್ಯ ಹಾಗು ವಿಧಾನ ಪರಿಷತ್ ಸ್ಥಾನಕ್ಕೂ ರಾಜಿನಾಮೆ ಕೊಟ್ಟು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದೇನೆ. ನನ್ನನ್ನು ಸೂಕ್ತ ಗೌರವದಿಂದ ನಡೆಸಿಕೊಳ್ಳುವುದಾಗಿ ಹೇಳಿದ್ದಾರೆ ಎಂದು ನುಡಿದ ಜಗದೀಶ್ ಶೆಟ್ಟರ್, ರಾಜ್ಯದಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಮತ್ತಷ್ಟು ಶಕ್ತಿಯುತವಾಗಿ ಕಾರ್ಯ ನಿರ್ವಹಿಸಲಿದ್ದು, ಕಳೆದ ಬಾರಿಗಿಂತಲೂ ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಈ ಬಾರಿ ಗೆಲ್ಲುವುದು ಖಚಿತ ಎಂದರು.