ಆದಾಯ ತೆರಿಗೆ ಇಲಾಖೆಗೆ ವಿಚಾರಣೆಗಾಗಿ ಆಗಮಿಸಿದ್ದ ಇಂಧನ ಸಚಿವ ಡಿ.ಕೆ.ಶಿವಕುಮಾರ್, ವಿಚಾರಣೆಯ ನಂತರ ನಾನು ಜೀವನದಲ್ಲಿ ಬೇಕಾದಷ್ಟು ತನಿಖೆಗಳನ್ನು ನೋಡಿದ್ದೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನೊಂದು ತೆರೆದ ಪುಸ್ತಕದಂತೆ. ಕಾನೂನುಬದ್ಧವಾಗಿ ಕಾರ್ಯನಿರ್ವಹಿಸಿದ್ದೇನೆ. ನನ್ನ ರಾಜಕೀಯ ಜೀವನ ಪಾರದರ್ಶಕವಾಗಿದೆ ಎಂದು ತಿಳಿಸಿದ್ದಾರೆ. ನ್ಯಾಯಬದ್ಧವಾಗಿ ನಾನು ಜವಾಬ್ದಾರಿ ನಿರ್ವಹಿಸಿದ್ದೇನೆ. ಒಂದು ವೇಳೆ, ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸಿದ್ದೇನೆ ಎಂದಾದಲ್ಲಿ ಶಿಕ್ಷೆ ಅನುಭವಿಸಲು ಸಿದ್ದನಿದ್ದೇನೆ ಎಂದರು, ಐಟಿ ವಿಚಾರಣೆ ಬಗ್ಗೆ ಈ