ಗದಗ : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮುಂದಿನ ರಾಜಕಿಯ ನಡೆಯ ಬಗ್ಗೆ ಸಾಕಷ್ಟು ಚರ್ಚೆ ನಡೆದಿರುವ ಬೆನ್ನಲ್ಲೇ ತಾವು ಗಂಗಾವತಿ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ.ತಮ್ಮ ತೀರ್ಮಾನವನ್ನು ಘೋಷಿಸುವುದಕ್ಕೂ ಮುನ್ನವೇ ರೆಡ್ಡಿ ಗಂಗಾವತಿಯಲ್ಲಿ ತಮ್ಮದೇ ರೀತಿಯಲ್ಲಿ ಅಸಲಿ ಆಟ ಪ್ರಾರಂಭಿಸಿದ್ದಾರೆ.ಜನಾರ್ದನ ರೆಡ್ಡಿಯವರು ಇಂದು ನಗರದ ಐತಿಹಾಸಿಕ ಬಸವೇಶ್ವರ ಪುತ್ಥಳಿ ವೀಕ್ಷಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಗಂಗಾವತಿ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ನಿಶ್ಚಯಿಸಿದ್ದೆನೆ ಎಂದು ತಿಳಿಸಿದ್ದಾರೆ.