ಬೆಂಗಳೂರು : ಮುಖ್ಯಮಂತ್ರಿಗಳ ಜೊತೆ ಮಾತನಾಡಿ ನಾನೇ ಗೃಹಲಕ್ಷ್ಮಿಯನ್ನ ಸ್ವಲ್ಪ ಹೋಲ್ಡ್ ಮಾಡಿಸಿದ್ದೇನೆ. ಗಲಾಟೆ ಕಡಿಮೆ ಮಾಡಲು ಹೀಗೆ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆ ವಿಳಂಬ ವಿಚಾರಕ್ಕೆ ನಗರದಲ್ಲಿಂದು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಗೃಹಲಕ್ಷ್ಮಿಯನ್ನ ನಾನೇ ಸ್ವಲ್ಪ ಹೋಲ್ಡ್ ಮಾಡಿಸಿದ್ದೇನೆ. ಗಲಾಟೆ ಕಡಿಮೆ ಮಾಡಲು ಹೀಗೆ ಮಾಡಿದ್ದೇನೆ. ಮಹಿಳಾ ಸಚಿವರೊಂದಿಗೆ ಒಂದು ಸಭೆ ಮಾಡಿ, ಸರಳವಾಗಿ ಯೋಜನೆ ಅನುಷ್ಠಾನ ಮಾಡ್ತೀವಿ. ಭ್ರಷ್ಟಾಚಾರ