ಐ ಲವ್ ಕಾಂಗ್ರೆಸ್ ಅದಕ್ಕೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದೇವೆ ಎಂದು ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಹೇಳಿದ್ದಾರೆ. ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಯಾವ ಅಭ್ಯರ್ಥಿಗೆ ಮತ ಚಲಾಯಿಸಿದ್ದೀರಿ ಎಂಬ ಪ್ರಶ್ನೆಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರುವುದಾಗಿ ಹೇಳಿದರು. ಕಾಂಗ್ರೆಸ್ ಅಭ್ಯರ್ಥಿಗೆ ಯಾಕೆ ಮತ ಹಾಕಿದ್ದೀರಿ ಅಂದರೆ, ಐ ಲವ್ ಕಾಂಗ್ರೆಸ್ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್