ರಾಯಚೂರು : ಆಪರೇಷನ್ ಕಮಲ ದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್, ನಾನು ಹಿಟ್ಲರ್ ಅಲ್ಲ. ಕಾನೂನು ಚೌಕಟ್ಟಿನಲ್ಲೇ ಕೆಲಸ ಮಾಡ್ತೀನಿ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಬಗ್ಗೆ ನನಗೆ ಗೊತ್ತಿಲ್ಲ ಆಪರೇಷನ್ ಕಮಲದ ಆಡಿಯೋ ಕೇಳಿದ್ದೇನೆ. ಯಾರು ಮಾರಾಟ ಆಗುತ್ತಾರೋ, ಯಾರು ದುಡ್ಡು ಕೊಡುತ್ತಾರೋ ಗೊತ್ತಿಲ್ಲ. ಈ ಬಗ್ಗೆ ನಾಳೆ ಸದನದಲ್ಲಿ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಪ್ರಸಕ್ತ