ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರಂತೆ ನಾನೂ ನಿವೃತ್ತಿಯ ಅಂಚಿನಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಅವರು ಅಧ್ಯಕ್ಷೆ ಹುದ್ದೆಯಿಂದ ನಿವೃತ್ತಿಯಾಗುತ್ತಿದ್ದಾರೆ. ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಹೇಳಿಲ್ಲ ಎಂದು ತಿಳಿಸಿದ್ದಾರೆ. ಕಳೆದ ಬಾರಿಯೇ ಚುನಾವಣೆಗೆ ಸ್ಪರ್ಧಿಸಬಾರದು ಎಂದುಕೊಂಡಿದ್ದೆ, ಬಿಜೆಪಿಯವರ ಕೋಮುವಾದ ನೋಡಿ ಮತ್ತೆ ಸ್ಪರ್ಧಿಸಿದ್ದೆ. ಮುಂಬರುವ ವಿಧಾನಸಭೆ ಚುನಾವಣೆಯ ಬಳಕ ಮತ್ತೆ ಸ್ಪರ್ಧೆ ಮಾಡಲ್ಲ. ಆದರೆ, ರಾಜಕೀಯದಲ್ಲಿ ಸಕ್ರೀಯವಾಗಿರುತ್ತೇನೆ ಎಂದಿದ್ದಾರೆ. ವರುಣಾ ಕ್ಷೇತ್ರದಿಂದ ಸೋಲುತ್ತೇನೆ