ಬೆಂಗಳೂರು : ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 25 ದಿನಗಳ ನಂತರ ಇದೀಗ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಈ ಹಿನ್ನಲೆಯಲ್ಲಿ ಕೆಲವು ಸಚಿವ ಸ್ಥಾನ ಆಕಾಕ್ಷಿಗಳು ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಸಮಾಧಾನಗೊಂಡ ಶಾಸಕರನ್ನು ಭೇಟಿ ಮಾಡಿ ಅವರ ಜೊತೆ ಮಾತುಕತೆ ನಡೆಸಿ ಸಮಾಧಾನಪಡಿಸಿದ್ದಾರೆ. ಇದೀಗ ಅಸಮಾಧಾನಗೊಂಡ ಶಾಸಕ ರಾಜುಗೌಡ ಸಿಎಂ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನನಗೆ ಸಚಿವ ಸ್ಥಾನ