ಹಿಂದೂ ದೇವತೆಗಳಿಗೆ ಆಕ್ಷೇಪರ್ಹ ಪದ ಬಳಕೆ ಮಾಡಿರುವ ಆರೋಪದ ಕುರಿತಾಗಿ ತಮ್ಮ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶ ನೀಡಿರುವ ಕಾರಣ, ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಹೇಳಿದ್ದಾರೆ.ತಮ್ಮ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯವು ತನಿಖೆ ನಡೆಸಲು ಕೊಡಿಗೆಹಳ್ಳಿ ಪೊಲೀಸರಿಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಸ್ಪಷ್ಟನೆ ನೀಡಿರುವ ಅವರು, ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕಾರ ಕೊಡುವುದಾಗಿ ತಿಳಿಸಿದ್ದಾರೆ.